- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
- ಲಿಂಕ್ ಪಡೆಯಿರಿ
- X
- ಇಮೇಲ್
- ಇತರ ಅಪ್ಲಿಕೇಶನ್ಗಳು
ಜನೆವರಿ 19ರಿಂದ ಆರಂಭವಾಗಲಿರುವ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಶಿಖರ ಧವನ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಶ್ರೇಯಸ್ ಅಯ್ಯರ್, ಋತುರಾಜ್ ಗಾಯಕ್ವಾಡ್, ವೆಂಕಟೇಶ್ ಅಯ್ಯರ್, ಪ್ರಸಿದ್ದ ಕೃಷ್ಣ, ರವಿಚಂದ್ರನ್ ಅಶ್ವಿನ್, ಯುಜ್ವೇಂದ್ರ ಚಹಲ್ ಒಳಗೊಂಡ ತಂಡಕ್ಕೆ KL ರಾಹುಲ್ ನಾಯಕ ಮತ್ತು ಜಸ್ಪ್ರೀತ್ ಬುಮ್ರಾ ಉಪನಾಯಕ.
ಗಾಯದ ಸಮಸ್ಯೆಯಿಂದ ಸೌತ್ ಆಫ್ರಿಕಾ ವಿರುದ್ಧದ ಟೆಸ್ಟ್ ತಂಡದಲ್ಲಿ ಅಲಭ್ಯವಾಗಿದ್ದ ರೋಹಿತ್ ಶರ್ಮಾ ಅವರು ಏಕದಿನ ತಂಡಕ್ಕೂ ಅಲಭ್ಯವಾಗಿದ್ದರೆ.
"ಟೀಮ್ ಇಂಡಿಯಾದ ಮೂರು ಫಾರ್ಮ್ಯಾಟ್ ನಲ್ಲಿ ಆಡುವ KL ರಾಹುಲ್ ಅವರನ್ನು ತಂಡದ ನಾಯಕನನ್ನಾಗಿ ನೇಮಿಸಲಾಗಿದೆ ಜೊತೆಗೆ ಜಸ್ಪ್ರೀತ್ ಬುಮ್ರಾ ಅವರನ್ನು ಏಕದಿನ ತಂಡದ ಉಪನಾಯಕನನ್ನಾಗಿ ನೇಮಿಸಲಾಗಿದೆ.ಜೊತೆಗೆ ಕೆಲವು ಯುವ ಆಟಗಾರರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ ಎಂದು " ಚೇತನ್ ಶರ್ಮಾ ಹೇಳಿದರು.
ಐಪಿಎಲ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಮುನ್ನಡೆಸಿದ ಅನುಭವವಿರುವ KL ರಾಹುಲ್ ಅವರು ರೋಹಿತ್ ಶರ್ಮಾ ಅವರ ಅನುಪಸ್ಥಿತಿಯಲ್ಲಿ ಜನೆವರಿ 19 ರಿಂದ ಆರಂಭವಾಗಲಿರುವ ಸೌತ್ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ತಂಡವನ್ನು ಮುನ್ನಡೆಸಲಿದ್ದಾರೆ.
"ಋತುರಾಜ್ ಗಾಯಕ್ವಾಡ್ ಮತ್ತು ವೆಂಕಟೇಶ್ ಅಯ್ಯರ್ ಅವರು 2021ರ ಐಪಿಎಲ್ ಮತ್ತು ವಿಜಯ ಹಜಾರೆ ಟ್ರೋಫಿಯಲ್ಲಿ ತೋರಿದ ಅದ್ಭುತ ಪ್ರದರ್ಶನದ ಕಾರಣದಿಂದ ತಂಡದಲ್ಲಿ ಸ್ಥಾನ ಪಡೆದಿದ್ದಾರೆ".
"ಜೊತೆಗೆ ತಂಡದಲ್ಲಿ ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್, ವಾಷಿಂಗ್ಟನ್ ಸುಂದರ್ ಅವರು ಕೂಡ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ".
"ಅನುಭವಿ ಆಟಗಾರರಾದ ಶಿಖರ ದವನ್ ಅವರನ್ನು ಐಪಿಎಲ್ ಮತ್ತು ಡೋಮೆಸ್ಟಿಕ್ ಪಂದ್ಯಗಳಲ್ಲಿ ತೋರಿದ ಪ್ರದರ್ಶನ ಮತ್ತು ಅವರ ಅನುಭವದ ಕಾರಣದಿಂದ ಮತ್ತೆ ತಂಡದಲ್ಲಿ ಸ್ಥಾನ ಪಡೆದಿದ್ದಾರೆ."
"ಇವೆಲ್ಲದರ ಹೊರತಾಗಿ ರವೀಂದ್ರ ಜಡೇಜಾ ಮತ್ತು ಅಕ್ಷರ್ ಪಟೇಲ್ ಅವರು ಸಹ ಗಾಯದಿಂದ ಚೇತರಿಸಿಕೊಳ್ಳದ ಕಾರಣ ಅವರನ್ನು ತಂಡದಿಂದ ಕೈಬಿಡಲಾಗಿದೆ. ಜೊತೆಗೆ ರವಿಚಂದ್ರನ್ ಆಶ್ವಿನ್ ಅವರು 2017ರ ನಂತರ ಟೀಮ್ ಇಂಡಿಯಾದ ಏಕದಿನ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ".
"ಮೊಹಮ್ಮದ್ ಶಮಿ ಅವರಿಗೆ ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ವಿಶ್ರಾಂತಿ ನೀಡಿ, ಪ್ರಸಿದ್ಧ ಕೃಷ್ಣಾ ಅವರಿಗೆ ಅವಕಾಶ ನೀಡಲಾಗಿದೆ" ಎಂದು ಬಿಸಿಸಿಐ ಆಯ್ಕೆಗಾರರ ತಂಡದ ಅಧ್ಯಕ್ಷ ಚೇತನ್ ಶರ್ಮಾ ತಿಳಿಸಿದ್ದಾರೆ.
ಸೌತ್ ಆಫ್ರಿಕಾ ವಿರುದ್ಧದ ಸರಣಿಗೆ ಆಯ್ಕೆಯಾದ ಭಾರತದ 18 ಸದಸ್ಯರ ತಂಡ
KL ರಾಹುಲ್ ( ನಾಯಕ ), ಶಿಖರ ಧವನ್, ವಿರಾಟ್ ಕೊಹ್ಲಿ, ರಿಷಬ್ ಪಂತ್, ಋತುರಾಜ್ ಗಾಯಕ್ವಾಡ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾಧವ, ಯುಜ್ವೇಂದ್ರ ಚಹಲ್, ರವಿಚಂದ್ರನ್ ಆಶ್ವಿನ್,ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಜಸ್ಪ್ರೀತ್ ಬುಮ್ರಾ(ಉಪನಾಯಕ ), ದೀಪಕ್ ಚಹರ್, ಪ್ರಸಿದ್ಧ ಕೃಷ್ಣಾ, ಶಾರ್ದುಲ್ ಠಾಕೂರ್, ಮಹಮ್ಮದ್ ಸಿರಾಜ್.
ಕಾಮೆಂಟ್‌ಗಳು
ಕಾಮೆಂಟ್ ಪೋಸ್ಟ್ ಮಾಡಿ